ಆಸೆಯೆಂಬ ಶೂಲದ ಮೇಲೆ ವೇಷವೆಂಬ ಹೆಣನ ಕುಳ್ಳಿರಿಸಿ; ಧರೆಯ ಮೇಲುಳ್ಳ ಹಿರಿಯರು ಹೀಂಗೆ ಸವೆದರು ನೋಡಾ ! ಆಸೆಯ ಮುಂದಿಟ್ಟುಕೊಂಡು ಸುಳಿವ ಹಿರಿಯರ ಕಂಡು ಹೇಸಿಕೆಯಾಗಿತ್ತು ಗುಹೇಶ್ವರಾ