ಆ ಭಸ್ಮತಾಗಿ ಬ್ರಹ್ಮ ತನ್ನ ಕಪಾಲವಿಡಿದನು

ವಿಕಿಸೋರ್ಸ್ದಿಂದ


Pages   (key to Page Status)   

ಆ ಭಸ್ಮತಾಗಿ ಬ್ರಹ್ಮ ತನ್ನ ಕಪಾಲವಿಡಿದನು. ಗಣನಾಥನ ಐವತ್ತೆರಡು ಸರ ಹರಿದು ಬಿದ್ದವು. ಆ ಭಸ್ಮತಾಗಿ ಅಂಡಜಮುಗ್ಧೆಯ ಮೂರು ಮೊಲೆ ಹರಿದು ಬಿದ್ದವು. ನಾದಪ್ರಿಯ ನಂದಿಯನೇರಿಕೊಂಡು ಅತೀತನ ಮೇಲೆ ಆನಂದಸಿಂಹಾಸನವನಿಕ್ಕಿ ಕುಳ್ಳಿತ್ತ, ಕೂಡಲಸಂಗಮದೇವರ ದೇವತ್ವ ಕೆಟ್ಟಿತ್ತು.