ಇಂತೀ ಮರ್ತ್ಯಲೋಕದ ಮಹಾಗಣಂಗಳು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಇಂತೀ ಮರ್ತ್ಯಲೋಕದ ಮಹಾಗಣಂಗಳು ಅನಂತ ಪರೀಕ್ಷಣೆಯಿಂದ ಲಕ್ಷಣಾಲಕ್ಷಣಂಗಳಿಂದ ವಿಚಾರಿಸಿ ಮಾರ್ಗಕ್ರಿಯೆವಿಡಿದು ಭಕ್ತಗಣ ಮಧ್ಯದಲ್ಲಿ ಸಾಕಾರಕಂಥೆಯ ನಡೆನುಡಿಗಳ
ಪರಶಿವ ಗುರುಲಿಂಗಜಂಗಮಕ್ಕೆ ಸಮರ್ಪಿಸಿ ನಿರ್ಮಾಲ್ಯವಾದ ಪುಷ್ಪವ ಮಾರ್ಗಕ್ರಿಯಾಸ್ವರೂಪ ಸಮಾಧಿಯಲ್ಲಿ ಬಿಟ್ಟು ನಿರವಯವಾದರು ನೋಡ ! ಇಂತು ಮಾರ್ಗಾಚರಣೆಯನರಿದು ಅದರಲ್ಲಿ ಸಂತೃಪ್ತರಾಗಿ ಅದರಿಂದ ಮೀರಿತೋರುವ ಮೀರಿದ ಕ್ರಿಯಾಚರಣೆಯನರಿದು ಇದ್ಧು ಇಲ್ಲದಂತೆ
ಹೊದ್ದಿ ಹೊದ್ದದಂತೆ ನಿರಾಕಾರಕಂಥೆಯ ಪರಿಮಳ ನಡೆನುಡಿಗಳ ನಿರಾಕಾರ ಪರಶಿವ ಗುರುಲಿಂಗಜಂಗಮಕ್ಕೆ ಸಮರ್ಪಿಸಿ ನಿರ್ಮಾಲ್ಯವಾದ ಪುಷ್ಪವ ಮೀರಿದ ಕ್ರಿಯಾಸ್ವರೂಪ ಸಮಾಧಿಯಲ್ಲಿ ಬಿಟ್ಟು ನಿರವಯ ನಿರಂಜನರಾದರು ನೋಡ ! ಇಂತು ಮಾರ್ಗಕ್ರಿ[ಯೆ]ಯ ಮೀರಿದ ಕಿ[ಯೆ]ಯ ನಡೆ_ನುಡಿ_ಪರಿಣಾಮ_ತೃಪ್ತಿಯಲ್ಲಿ ತಾವೆ ತಾವಾಗಿರ್ಪರು ನೋಡ ! ಗುಹೇಶ್ವರಲಿಂಗಪ್ರಭುವೆಂಬ ನಾಮರೂಪುಕ್ರಿಯವಳಿದು ಸಂಗನಬಸವಣ್ಣನ ಬೆಳಗಿನೊಳಗೆ ಮಹಾಬಯಲಾದರು ನೋಡ !