ಇಂದ್ರಿಯ ನಿಗ್ರಹವ ಮಾಡಿದಡೆ ಹೊಂದುವವು ದೋಷಂಗಳು

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಇಂದ್ರಿಯ ನಿಗ್ರಹವ ಮಾಡಿದಡೆ ಹೊಂದುವವು ದೋಷಂಗಳು, ಮುಂದೆ ಬಂದು ಕಾಡುವವು ಪಂಚೇಂದ್ರಿಯಂಗಳು. ಸತಿಪತಿರತಿಸುಖವ ಬಿಟ್ಟರೆ ಸಿರಿಯಾಳ ಚಂಗಳೆಯವರು ಸತಿಪತಿರತಿಸುಖಭೋಗೋಪಭೋಗವ, ವಿಳಾಸವ ಬಿಟ್ಟನೆ ಸಿಂಧುಬಲ್ಲಾಳನು ನಿಮ್ಮ ಮುಟ್ಟಿ ಪರಧನ-ಪರಸತಿಯರಿಗೆಳಸಿದಡೆ ನಿಮ್ಮಾಚಾರಕ್ಕೆ ದೂರ, ಕೂಡಲಸಂಗಮದೇವಾ. ಇಂದ್ರಿಯ ನಿಗ್ರಹವ ಮಾಡಿದಡೆ ಹೊಂದುವವು ದೋಷಂಗಳು
ಮುಂದೆ ಬಂದು ಕಾಡುವವು ಪಂಚೇಂದ್ರಿಯಂಗಳು. ಸತಿಪತಿರತಿಸುಖವ ಬಿಟ್ಟರೆ ಸಿರಿಯಾಳ ಚಂಗಳೆಯವರು ಸತಿಪತಿರತಿಸುಖಭೋಗೋಪಭೋಗವ
ವಿಳಾಸವ ಬಿಟ್ಟನೆ ಸಿಂಧುಬಲ್ಲಾಳನು ನಿಮ್ಮ ಮುಟ್ಟಿ ಪರಧನ-ಪರಸತಿಯರಿಗೆಳಸಿದಡೆ ನಿಮ್ಮಾಚಾರಕ್ಕೆ ದೂರ
ಕೂಡಲಸಂಗಮದೇವಾ.