ಇಚ್ಛಾಶಕ್ತಿ ತನ್ನ ಗರ್ಭದಲ್ಲಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಇಚ್ಛಾಶಕ್ತಿ ತನ್ನ ಗರ್ಭದಲ್ಲಿ ಈರೇಳುಲೋಕವ ಹೆತ್ತಳು ನೋಡಾ. ಆ ಲೋಕಾಧಿಲೋಕಂಗಳೊಳಗೆ ತಾನೇಕಾಕಿಯಾಗಿ ಆ ಲೋಕದ ಉತ್ಪತ್ತಿ ಸ್ಥಿತಿ ಪ್ರಳಯಕ್ಕೊಳಗಾಗದೆ ನಿತ್ಯಳಾಗಿಪ್ಪಳು ನೋಡಾ. ಆ ಇಚ್ಛಾಶಕ್ತಿ ನಿಶ್ಚಿಂತನ ನೆರೆದು ನಿರಾಳವಾದುದು ತಾನೆಂದು ಕಂಡಾತನ[ನು] ಸರ್ವಜ್ಞ ಶರಣೆನೆಂಬೆನು. ಆತನ ಅಲ್ಲಮಪ್ರಭುವೆಂಬೆನು. ಆ ಪರಮ ನಿರಂಜನಪ್ರಭುವಿಗೆ ನಮೋ ನಮೋಯೆಂದು ಬದುಕಿದೆನು ಕಾಣಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.