ಇಡುವ ಕೊಡುವ ಬಿಡುವ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಇಡುವ ಕೊಡುವ ಬಿಡುವ ಕಟ್ಟುವ ಗೊಡವೆಗಾರನಯ್ಯಾ; ಶರಣನು ಗಾಳಿಯ ಮರೆಯ ಜ್ಯೋತಿಯಂತೆ
ಸುಖಸೂಸದೆ ಇಪ್ಪನು. ತನ್ನರಿವು ಮರವೆಗಳೆಲ್ಲಾ ಪ್ರಾಣಲಿಂಗಾಧೀನವಲ್ಲದೆ
ಮತ್ತೊಂದನರಿಯನು. ಆಸರುವನಲ್ಲ ಬೇಸರುವನಲ್ಲ; ಜಗದ ಕಳಕಳಕ್ಕೆ ಎದ್ದು ಹರಿದಾಡುವನಲ್ಲ. ಸುಖಮುದ್ರಿತನು ಕೂಡಲಚೆನ್ನಸಂಗಾ ಲಿಂಗೈಕ್ಯನು.