ಇತ(ದಿ?)ರ ಭ್ರಮಿತನು ಭಕ್ತನಲ್ಲ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಇತ(ದಿ?)ರ ಭ್ರಮಿತನು ಭಕ್ತನಲ್ಲ
ಲೋಕೋಪಚಾರಿ ಜಂಗಮವಲ್ಲ. ಹೇಳಿಹೆನು ಕೇಳಿರಣ್ಣಾ: ಜಂಗಮ ಪ್ರೇಮಿಯಾದರೆ ಭಸಿತ ರುದ್ರಾಕ್ಷೆ ಸಹ ಶಿವಸ್ವರೂಪ ಕಾಣುತ್ತ
ನಮಸ್ಕರಿಸಿ ಬಿಜಯಂ ಮಾಡಿಕೊಂಡು ಬಂದು ಮನಹರುಷದಲ್ಲಿ ಭೋಜನವ ಮಾಡಿಸೂದೀಗ ಭಕ್ತಂಗೆ ಲಕ್ಷಣ. ಕಾಡೊಳಗಿರಲಿ ಊರೊಳಗಿರಲಿ ಮಠದಲ್ಲಿರಲಿ ಮನೆಯಲ್ಲಿರಲಿ ಲಿಂಗವಂತರು ಕರೆಯಬಂದರೆ
ಹೋಗಬೇಕೆಂಬ ಅಭಿಲಾಷೆಯುಳ್ಳಡೆ
ತಾನಿದ್ದಲ್ಲಿ ತಾ ಮಾಡುವಂಥ ಅಷ್ಟವಿಧಾರ್ಚನೆ ಷೋಡಶೋಪಚಾರ ಲಿಂಗಕ್ರಿಯೆಗಳು ನಿತ್ಯನೇಮವು ಆದ ಬಳಿಕ ಮತ್ತೆ ತಾ ಹೋಗಿ ತನ್ನ ಗುಂಪ ತೋರದೆ
ಭಕ್ತರಾಶ್ರಯದಲ್ಲಿ ಭೋಜನವ ಮಾಡುವುದೀಗ ಜಂಗಮಕ್ಕೆ ಲಕ್ಷಣ. ಅಂತಲ್ಲದೆ ಗ್ರಹಸ್ಥಾಶ್ರಮದಲ್ಲಿ ಕ್ರಿಯೆ ಮಾಡಿದರೆ ಜಂಗಮಕ್ಕೆ ಹೇಳುವ ಅರಿವು ಕೊರಮಜೀವಿಯಂತಾಯಿತ್ತಾಗಿ_ ಇದು ಕಾರಣ ಲೋಕೋಪಚಾರಿಗಳಾಗಿ ಒಡಲ ಹೊರೆವವರ ನಮ್ಮ ಗುಹೇಶ್ವರಲಿಂಗವು ಬಲ್ಲನಾಗಿ ಅವರ ಒಲ್ಲನಯ್ಯಾ.