ಇದ್ದುದ ಹೇಳಲಿಲ್ಲ ಇದ್ದುದ ತೋರಲಿಲ್ಲ ಹೊದ್ದಿದ ಆಶ್ರಮವ ನಾನೇನೆಂಬೆನು ಶಿವನೆ? ಭದ್ರಕಾಳಿಯ ಬಸಿರೊಳಗಿರ್ದ ಬಾವಿಯ ಸರ್ಪನು ಸಿದ್ಧರಸದ ಘಟಿಕೆಯ ನುಂಗಿ ಎದ್ದು ಆಡಿತ್ತು ನೋಡಾ ! ಹದ್ದಿನ ಹೆಡೆಯಲ್ಲಿ ಮಾಣಿಕವಿದ್ದುದು ಇಲ್ಲೆಂಬ ಎದ್ದು ಹೇಳುವ ಕನಸು ತಾನಲ್ಲ ಗುಹೇಶ್ವರ.