ಇನ್ನಿವಕ್ಕೆ ಅರ್ಪಿತಮುಖಂಗಳ ಹೇಳಿಹೆನು:

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಇನ್ನಿವಕ್ಕೆ ಅರ್ಪಿತಮುಖಂಗಳ ಹೇಳಿಹೆನು: ಗುರುಲಿಂಗ ಶಿವಲಿಂಗ ಜಂಗಮಲಿಂಗ ಪ್ರಸಾದಲಿಂಗ ಮಹಾಲಿಂಗ ಈ ಐದು ಲಿಂಗವೂ ಆಚಾರಲಿಂಗಕ್ಕೆ ಮುಖವೆಂದರಿಯಲುಬೇಕಯ್ಯ. ಶಿವಲಿಂಗ ಜಂಗಮಲಿಂಗ ಪ್ರಸಾದಲಿಂಗ ಮಹಾಲಿಂಗ ಆಚಾರಲಿಂಗ- ಈ ಐದು ಲಿಂಗವು ಗುರುಲಿಂಗಕ್ಕೆ ಮುಖವೆಂದರಿಯಲುಬೇಕಯ್ಯ. ಜಂಗಮಲಿಂಗ ಪ್ರಸಾದಲಿಂಗ ಮಹಾಲಿಂಗ ಆಚಾರಲಿಂಗ ಗುರುಲಿಂಗ- ಈ ಐದು ಲಿಂಗವು ಶಿವಲಿಂಗಕ್ಕೆ ಮುಖವೆಂದರಿಯಲುಬೇಕಯ್ಯ. ಪ್ರಸಾದಲಿಂಗ ಮಹಾಲಿಂಗ ಆಚಾರಲಿಂಗ ಗುರುಲಿಂಗ ಶಿವಲಿಂಗ- ಈ ಐದು ಲಿಂಗವು ಜಂಗಮಲಿಂಗಕ್ಕೆ ಮುಖವೆಂದರಿಯಲುಬೇಕಯ್ಯ. ಮಹಾಲಿಂಗ ಆಚಾರಲಿಂಗ ಗುರುಲಿಂಗ ಶಿವಲಿಂಗ ಜಂಗಮಲಿಂಗ- ಈ ಐದು ಲಿಂಗವು ಪ್ರಸಾದಲಿಂಗಕ್ಕೆ ಮುಖವೆಂದರಿಯಲುಬೇಕಯ್ಯ. ಆಚಾರಲಿಂಗ ಗುರುಲಿಂಗ ಶಿವಲಿಂಗ ಜಂಗಮಲಿಂಗ ಪ್ರಸಾದಲಿಂಗ- ಈ ಐದು ಲಿಂಗವು ಮಹಾಲಿಂಗಕ್ಕೆ ಮುಖವೆಂದರಿಯಲುಬೇಕಯ್ಯ. ಹೀಂಗೆ ಅಂಗಮುಖಂಗಳಲ್ಲಿಯೂ ಲಿಂಗವೇ ಮುಖವಾಗಿಪ್ಪ ಭೇದವನರಿಯಲುಬೇಕಯ್ಯಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.