ವಿಷಯಕ್ಕೆ ಹೋಗು

ಇನ್ನು ಮನಸ್ಸು ಧಾರಣಯೋಗದ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ಪ್ರಕಾಶಕರು: anubhava mantapa
ಮೂಲ: vachana saahitya


ಇನ್ನು ಧಾರಣಯೋಗದ ಲಕ್ಷಣವೆಂತೆನೆ : ಸಂಕಲ್ಪ ವಿಕಲ್ಪಾತ್ಮಕವಾದ ಮನಸ್ಸು ಕಾಕಾಕ್ಷಿಯಂತೆ ಬಾಹ್ಯಾಭ್ಯಂತರಗಳಿಗೆ ತಾನೇ ಕಾರಣವಪ್ಪುದರಿಂದೆ ಆ ಮನಮಂ ಮುದ್ರಾಕರಣಬಂಧಂಗಳಿಂದಂತರ್ಮುಖಮಂ ಮಾಡಿ
ಅನವಚ್ಛಿನ್ನ ತೈಲಧಾರೆಯಂತೆ ಶಿವಧ್ಯಾನಮಂ ಮಾಡುತಿರಲು ಆ ಧ್ಯಾನಾಕಾರದಿಂ ಕರಿಗೊಂಡ ವಸ್ತುವಿನೊಳು ಆ ಮನವು ನಿಶ್ಚಲಮಾಗಲದೇ ಧಾರಣಯೋಗ ನೋಡಾ ಅಖಂಡೇಶ್ವರಾ.