Library-logo-blue-outline.png
View-refresh.svg
Transclusion_Status_Detection_Tool

ಇನ್ನು ವಾಮಪಾದದ ಹಠಯೋಗಕ್ಕೆ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಇನ್ನು ಹಠಯೋಗಕ್ಕೆ ಸಾಧನಮಾದ ಬಂಧತ್ರಯಂಗಳ ಭೇದವೆಂತೆಂದೊಡೆ : ವಾಮಪಾದದ ಹಿಮ್ಮಡದಿಂ ಯೋನಿಸ್ಥಾನವನೊತ್ತಿ ಬಲಪಾದಮಂ ನೀಡಿ
ಎರಡು ಹಸ್ತಗಳಿಂದೆ ಅಂಗುಷ್ಠಮಂ ಪಿಡಿದು
ಕಂಠಸ್ಥಾನದಲ್ಲಿ ಚುಬುಕವನಿರಿಸಿ
ವಾಯುಧಾರಣಮಂ ಮಾಡುವುದೆ ಜಾಲಂಧರಬಂಧವೆನಿಸುವುದು. ವಾಮಪಾದದ ಹಿಮ್ಮಡದಿಂದಾಧಾರವನೊತ್ತಿ
ಎಡದ ತೊಡೆಯ ಮೇಲೆ ಬಲದ ಪಾದವನಿರಿಸಿ ವಾಯುಪೂರಣಮಂ ಮಾಡಿ
ಜಾಲಂಧರಮಂ ಬಂದ್ಥಿಸುವುದೆ ಮಹಾಬಂಧವೆನಿಸುವುದು. ನಾಬ್ಥಿಯ ಊಧ್ರ್ವ ಅಧೋಭಾಗಂಗಳನು ಬಲಾತ್ಕಾರದಿಂ ಬಂದ್ಥಿಪುದೆ ಉಡ್ಯಾಣಬಂಧವೆನಿಸುವುದು. ಈ ಬಂಧತ್ರಯಂಗಳಿಂದೆ ಛೇದನ ಚಾಲನ ದೋಹನಾದಿ ಕ್ರೀಯಂಗಳಿಂದೆ ಪೆಚ್ಚಿರ್ದ ಜಿಹ್ವೆಯನು ಭ್ರೂಮಧ್ಯಸ್ಥಾನಕ್ಕೇರಿಸಿ ಸ್ಥಿರದೃಷ್ಟಿಯಾಗಿಹುದೇ ಹಠಯೋಗ ನೋಡಾ ಅಖಂಡೇಶ್ವರಾ.