ಇನ್ನೇವೆನಿನ್ನೇವೆನಯ್ಯಾ ಎನ್ನ ಮನವೆಂಬ ಮರ್ಕಟನ ದಾಳಿ ಘನವಾಯಿತ್ತು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಇನ್ನೇವೆನಿನ್ನೇವೆನಯ್ಯಾ ಎನ್ನ ಮನವೆಂಬ ಮರ್ಕಟನ ದಾಳಿ ಘನವಾಯಿತ್ತು, ಎನ್ನ ನಿಂದಲ್ಲಿ ನಿಲ್ಲಲೀಯದು, ಎನ್ನ ಕುಳಿತಲ್ಲಿ ಕುಳ್ಳಿರಲೀಯದು, ಕ್ಷಣದಲ್ಲಿ ಪಾತಾಳಕ್ಕೆ ಐದುತ್ತಿದೆ. ಕ್ಷಣದಲ್ಲಿ ಆಕಾಶಕ್ಕೆ ಐದುತ್ತಿದೆ. ಕ್ಷಣದಲ್ಲಿ ದಿಗ್ದೆಸೆಗೆ ಐದುತ್ತಿದೆ. ಕೂಡಲಸಂಗಮದೇವಾ ಈ ಮನವೆಂಬ ಮರ್ಕಟನ ದಾಳಿಯನೆಂದಿಗೆ ನೀಗಿ, ಎಂದು ನಿಮ್ಮನೊಡಗೂಡುವೆನಯ್ಯಾ. ಇನ್ನೇವೆನಿನ್ನೇವೆನಯ್ಯಾ ಎನ್ನ ಮನವೆಂಬ ಮರ್ಕಟನ ದಾಳಿ ಘನವಾಯಿತ್ತು
ಎನ್ನ ನಿಂದಲ್ಲಿ ನಿಲ್ಲಲೀಯದು
ಎನ್ನ ಕುಳಿತಲ್ಲಿ ಕುಳ್ಳಿರಲೀಯದು
ಕ್ಷಣದಲ್ಲಿ ಪಾತಾಳಕ್ಕೆ ಐದುತ್ತಿದೆ. ಕ್ಷಣದಲ್ಲಿ ಆಕಾಶಕ್ಕೆ ಐದುತ್ತಿದೆ. ಕ್ಷಣದಲ್ಲಿ ದಿಗ್ದೆಸೆಗೆ ಐದುತ್ತಿದೆ. ಕೂಡಲಸಂಗಮದೇವಾ ಈ ಮನವೆಂಬ ಮರ್ಕಟನ ದಾಳಿಯನೆಂದಿಗೆ ನೀಗಿ
ಎಂದು ನಿಮ್ಮನೊಡಗೂಡುವೆನಯ್ಯಾ.