ಇರುಳಿನ ಮುಖದೊಳಗೊಂದು ನವರತ್ನದಖಂಡಿತ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಇರುಳಿನ ಮುಖದೊಳಗೊಂದು ನವರತ್ನದಖಂಡಿತ ಹಾರವಡಗಿತ್ತು. ಹಗಲಿನ ಮುಖದೊಳಗೊಂದು ನವಚಿತ್ರಪತ್ರದ ವೃಕ್ಷವಡಗಿತ್ತು. ರತ್ನದ ಹಾರವ ವೃಕ್ಷಕ್ಕಾಹಾರವನಿಕ್ಕಿದಡೆ
ಗುಹೇಶ್ವರಲಿಂಗದಲ್ಲಿ ಪ್ರಾಣಲಿಂಗಕ್ಕೆ ಸುಖವಾಯಿತ್ತು.