ಇಲಿ ಗಡಹನೊಡ್ಡಿದಲ್ಲಿ ಇಪ್ಪಂತೆ ಎನ್ನ ಸಂಸಾರ
ಗೋಚರ
ಲೇಖಕರು: Basavanna
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಇಲಿ ಗಡಹನೊಡ್ಡಿದಲ್ಲಿ ಇಪ್ಪಂತೆ ಎನ್ನ ಸಂಸಾರ, ಕೆಡೆವನ್ನಕ್ಕ ಮಾಣದು ಹೆರರ ಬಾಧಿಸುವುದನು ತನು ಕೆಡೆವನ್ನಕ್ಕ ಮಾಣದು, ಹೆರರ ಛಿದ್ರಿಸುವುದನು ಮನ ಕೆಡೆವನ್ನಕ್ಕ ಮಾಣದು. ಅಕಟಕಟಾ, ಸಂಸಾರಕ್ಕೆ ಆಸತ್ತೆ ಕೂಡಲಸಂಗಮದೇವಾ. 10
ಇಲಿ ಗಡಹನೊಡ್ಡಿದಲ್ಲಿ ಇಪ್ಪಂತೆ ಎನ್ನ ಸಂಸಾರ
ಕೆಡೆವನ್ನಕ್ಕ ಮಾಣದು ಹೆರರ ಬಾಧಿಸುವುದನು ತನು ಕೆಡೆವನ್ನಕ್ಕ ಮಾಣದು
ಹೆರರ ಛಿದ್ರಿಸುವುದನು ಮನ ಕೆಡೆವನ್ನಕ್ಕ ಮಾಣದು. ಅಕಟಕಟಾ
ಸಂಸಾರಕ್ಕೆ ಆಸತ್ತೆ ಕೂಡಲಸಂಗಮದೇವಾ. 10