ಇಲ್ಲದಲ್ಲಿ ಇಲ್ಲವಿದ್ದಿತ್ತು. ಇಲ್ಲವೆಂಬುದು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಇಲ್ಲದಲ್ಲಿ ಇಲ್ಲವಿದ್ದಿತ್ತು. ಇಲ್ಲವೆಂಬುದು ಉಂಟು ನೋಡಾ. ಉಂಟೆಂದಲ್ಲಿ `ಇಲ್ಲ' ಉಂಟಾಯಿತ್ತು. ಉಂಟೆಂದು ತಿಳಿದಡೆ ಅದೆ `ಇಲ್ಲ'. ಆ `ಇಲ್ಲ'ದಲ್ಲಿ ಒಂದು ತಲೆ ಉದಿಸಿತ್ತು. ಆ ತಲೆಯೊಳಗೆ ಮೂರು ಲಿಪಿಯ ಕಂಡೆ. ಲಿಪಿಯೊಳಗೊಂದು ಧ್ವನಿಯ ಕಂಡೆ. ಧ್ವನಿಯ ಬಣ್ಣ ತಲೆಯೆತ್ತದ ಮುನ್ನ
ಐದು ಬಾಯ ರಕ್ಕಸಿ ಆಗುಳಿಸಿ ನುಂಗಿದಳು. ಆ ರಕ್ಕಸಿಗೆ ಕೋಡಗ ಹುಟ್ಟಿ
ಕೋಣನ ಕೊರಳ ಕಚ್ಚಿತ್ತ ಕಂಡೆ. ಕೋಣನ ಕೋಡಗ ಮುರಿದು ಈಡಾಡಿದಡೆ ಕೋಡಗ ಸಿಕ್ಕಿತ್ತು. ಅಡವಿಯ ಸುಟ್ಟು ಆಕಾಶವ ಹೊಕ್ಕು ಗುಹೇಶ್ವರಲಿಂಗದಲ್ಲಿ ಗುರುಕಾರುಣ್ಯವ ಪಡೆದನು