ವಿಷಯಕ್ಕೆ ಹೋಗು

ಇಲ್ಲವೆಯ ಮೇಲೊಂದು ಉಂಟೆಂಬ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ಇಲ್ಲವೆಯ ಮೇಲೊಂದು ಉಂಟೆಂಬ ಪರಿಭಾವ
ಅಲ್ಲಿ ಇಲ್ಲಿ ಎನ್ನದೆ ತಾನೆ ನಿಂದಿತ್ತು ನೋಡಾ ! ತನ್ನಲ್ಲಿಯ ಪ್ರಕೃತಿಯ ತಾನೆ ಹಿಂಗಿಸಲು; ಅಲ್ಲಿಯೆ ಜ್ಞಾನ ಉದಯಿಸಿತ್ತು ! ಎಲ್ಲಾ ಎಡೆಯಲ್ಲಿ ನಿಂದ ನಿಜಪದವ ಗುಹೇಶ್ವರಾ ನಿಮ್ಮ ಶರಣ ಬಲ್ಲ.