ಇಷ್ಟಲಿಂಗವನು ಪ್ರಾಣಲಿಂಗವೆಂಬ ಕಷ್ಟವೆಲ್ಲಿಯದೊ?

ವಿಕಿಸೋರ್ಸ್ದಿಂದ



Pages   (key to Page Status)   


ಇಷ್ಟಲಿಂಗವನು ಪ್ರಾಣಲಿಂಗವೆಂಬ ಕಷ್ಟವೆಲ್ಲಿಯದೊ? ಇಷ್ಟಲಿಂಗ ಹೋದಡೆ ಪ್ರಾಣಲಿಂಗ ಹೋಗದು ನೋಡಾ. ಇಷ್ಟಲಿಂಗ ಪ್ರಾಣಲಿಂಗದ ಭೇದವನು ಗುಹೇಶ್ವರಾ
ನಿಮ್ಮ ಶರಣ ಬಲ್ಲ.