ಇಷ್ಟಲಿಂಗ ಸಂಬಂಧವಾದ ಬಳಿಕ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಇಷ್ಟಲಿಂಗ ಸಂಬಂಧವಾದ ಬಳಿಕ ಕಾಯಗುಣ ಕೆಟ್ಟು ಲಿಂಗವಾಯಿತ್ತು. ಪ್ರಾಣಲಿಂಗ ಸಂಬಂಧವಾದ ಬಳಿಕ ಕರಣಗುಣ ಕೆಟ್ಟು ಲಿಂಗಕರಣಂಗಳಾದುವು. ಭಾವಲಿಂಗ ಸಂಬಂಧವಾದ ಬಳಿಕ ಇಂದ್ರಿಯಗುಣ ಕೆಟ್ಟು ಲಿಂಗೇಂದ್ರಿಯಗಳಾದುವು. ಇದು ಕಾರಣ- ಶರಣಂಗೆ ಬೇರೆ ಲಿಂಗವಿಲ್ಲ
ಬೇರೆ ಅಂಗವಿಲ್ಲ. ಅರ್ಪಿತ ಅನರ್ಪಿತವೆಂಬ ಉಭಯ ಶಂಕೆ ಹಿಂಗಿತ್ತು
ಕೂಡಲಚೆನ್ನಸಂಗಯ್ಯಾ ನಿನ್ನೊಳಡಗಿದ ನಿಜೈಕ್ಯಂಗೆ