ಈಳೆ ನಿಂಬೆ ಮಾವು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಈಳೆ ನಿಂಬೆ ಮಾವು ಮಾದಲಕೆ ಹುಳಿನೀರನೆರೆದವರಾರಯ್ಯಾ? ಕಬ್ಬು ಬಾಳೆ ಹಲಸು ನಾರಿವಾಳಕ್ಕೆ ಸಿಹಿನೀರನೆರೆದವರಾರಯ್ಯಾ? ಕಳವೆ ರಾಜಾನ್ನ ಶಾಲ್ಯನ್ನಕ್ಕೆ ಓಗರದ ಉದಕವನೆರೆದವರಾರಯ್ಯಾ? ಮರುಗ ಮಲ್ಲಿಗೆ ಪಚ್ಚೆ ಮುಡಿವಾಳಕ್ಕೆ ಪರಿಮಳದುದಕವನೆರೆದವರಾರಯ್ಯಾ? ಇಂತೀ ಜಲವು ಒಂದೆ
ನೆಲನು ಒಂದೆ
ಆಕಾಶವು ಒಂದೆ. ಜಲವು ಹಲವು ದ್ರವ್ಯಂಗಳ ಕೂಡಿ ತನ್ನ ಪರಿಬೇರಾಗಿಹ ಹಾಗೆ
ಎನ್ನದೇವ ಚೆನ್ನಮಲ್ಲಿಕಾರ್ಜುನಯ್ಯನು ಹಲವು ಜಗಂಗಳ ಕೂಡಿಕೊಂಡಿರ್ದಡೇನು? ತನ್ನ ಪರಿ ಬೇರೆ.