Library-logo-blue-outline.png
View-refresh.svg
Transclusion_Status_Detection_Tool

ಈ ನೋಡಾ. ಶಿವಷಡಕ್ಷರಮಂತ್ರದಿಂದೆ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಈ ಶಿವಷಡಕ್ಷರಮಂತ್ರದಿಂದೆ ಸಾನಂದಋಷಿಯು ನರಕಜೀವಿಗಳನ್ನೆಲ್ಲ ಹರನ ಓಲಗದಲ್ಲಿರಿಸಿದನು ನೋಡಾ. ಈ ಶಿವಷಡಕ್ಷರಮಂತ್ರದಿಂದೆ ತಿರುಜ್ಞಾನಸಂಬಂಧಿಗಳು ಕೂನಪಾಂಡ್ಯನ ವಾದವ ಗೆದ್ದರು ನೋಡಾ. ಈ ಷಡಕ್ಷರಮಂತ್ರದಿಂದೆ ಶಿವಜಾತಯ್ಯನ ಶಿಷ್ಯ ಮಂತ್ರಜಾತಯ್ಯನು ಮಹಾಬಯಲನೈದಿದನು ನೋಡಾ. ಈ ಶಿವಷಡಕ್ಷರಮಂತ್ರದಿಂದೆ ಅಜಗಣ್ಣ ತಂದೆಗಳು ನಿಜಲಿಂಗೈಕ್ಯರಾದರು ನೋಡಾ. ಇಂತಪ್ಪ ಶಿವಷಡಕ್ಷರಮಂತ್ರವನು ಎನ್ನಂತರಂಗದ ಅರುಹಿನ ಮನೆಯಲ್ಲಿ ಬಚ್ಚಿಟ್ಟುಕೊಂಡು ಓಂ ನಮಃಶಿವಾಯ
ಓಂ ನಮಃಶಿವಾಯ
ಓಂ ನಮಃಶಿವಾಯ ಎಂದೆನುತಿರ್ದೆನಯ್ಯ ಅಖಂಡೇಶ್ವರಾ.