ವಿಷಯಕ್ಕೆ ಹೋಗು

ಉಂಬಾಗಳಿಲ್ಲೆನ್ನ

ವಿಕಿಸೋರ್ಸ್ದಿಂದ


ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ಉಂಬಾಗಳಿಲ್ಲೆನ್ನ, ಉಡುವಾಗಳಿಲ್ಲೆನ್ನ, ಬಂಧುಗಳು ಬಂದಾಗಳಿಲ್ಲೆನ್ನ. ಲಿಂಗಕ್ಕೆ ಇಲ್ಲೆಂಬ, ಜಂಗಮಕ್ಕೆ ಇಲ್ಲೆಂಬ, ಬಂದ ಪುರಾತರಿಗೆ ಇಲ್ಲೆಂಬ, ಸಾವಾಗ ದೇಹವ ದೇಗುಲಕ್ಕೆ ಒಯ್ಯೆಂಬ, ದೇವರಿಗೆ ಹೆಣ ಬಿಟ್ಟಿ ಹೇಳಿತ್ತೆ ಕೂಡಲಸಂಗಮದೇವಾ 222 ಉಂಬಾಗಳಿಲ್ಲೆನ್ನ
ಉಡುವಾಗಳಿಲ್ಲೆನ್ನ
ಬಂಧುಗಳು ಬಂದಾಗಳಿಲ್ಲೆನ್ನ. ಲಿಂಗಕ್ಕೆ ಇಲ್ಲೆಂಬ
ಜಂಗಮಕ್ಕೆ ಇಲ್ಲೆಂಬ
ಬಂದ ಪುರಾತರಿಗೆ ಇಲ್ಲೆಂಬ
ಸಾವಾಗ ದೇಹವ ದೇಗುಲಕ್ಕೆ ಒಯ್ಯೆಂಬ
ದೇವರಿಗೆ ಹೆಣ ಬಿಟ್ಟಿ ಹೇಳಿತ್ತೆ ಕೂಡಲಸಂಗಮದೇವಾ 222