ಉಡುವೆ ನಾನು ಲಿಂಗಕ್ಕೆಂದು,

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಉಡುವೆ ನಾನು ಲಿಂಗಕ್ಕೆಂದು
ತೊಡುವೆ ನಾನು ಲಿಂಗಕ್ಕೆಂದು
ಮಾಡುವೆ ನಾನು ಲಿಂಗಕ್ಕೆಂದು
ನೋಡುವೆ ನಾನು ಲಿಂಗಕ್ಕೆಂದು
ಎನ್ನಂತರಂಗ ಬಹಿರಂಗಗಳು ಲಿಂಗಕ್ಕಾಗಿ. ಮಾಡಿಯೂ ಮಾಡದಂತಿಪ್ಪೆ ನೋಡಾ. ಆನೆನ್ನ ಚೆನ್ನಮಲ್ಲಿಕಾರ್ಜುನನೊಳಗಾಗಿ ಹತ್ತರೊಡನೆ ಹನ್ನೊಂದಾಗಿಪ್ಪುದನೇನ ಹೇಳುವೆನವ್ವಾ!