Library-logo-blue-outline.png
View-refresh.svg
Transclusion_Status_Detection_Tool

ಉದಕದ ಕೊಡನ ಹೊತ್ತಾಡುವ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಉದಕದ ಕೊಡನ ಹೊತ್ತಾಡುವ ಗೊರವಿತಿಯ ಕೈಯಲ್ಲಿ ಕಂಕಣ
ಉಲಿವ ಗೆಜ್ಜೆ ಚರಣದಲ್ಲಿ. ಉರಿಯ ಗೊರವನ ನೆರೆವ ಭರವಸದಿಂದ ಬಂದಿರಲು ಬಹಳ ಮುಳ್ಳಡ್ಡಲಾದವಲ್ಲಾ ! ಕಂಕಣದುಲುಹು ನಂದಿ
ಕಣ್ಣುದೆರೆದಾ ಮುಳ್ಳಳಿಯಲು ಕಾಡುಗಿಚ್ಚೆದ್ದು ಕರಡವ ಸುಟ್ಟಂತೆ ಪ್ರಾಣಗುಣ ಪ್ರಧ್ವಂಸಕಂಗೆ ಅನ್ಯೋನ್ಯ ಭಾವತ್ರಯವುಂಟೆ ? ಶರಣಲಿಂಗಕ್ಕೆ ಸಂದಿಲ್ಲ ಗುಹೇಶ್ವರಾ.