ಉದಕ ಮೂರುತಿಯಾಗಿ ಉದಯವಾಯಿತ್ತು
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಉದಕ ಮೂರುತಿಯಾಗಿ ಉದಯವಾಯಿತ್ತು ಪಿಂಡಿಗೆಯಲ್ಲಿ. ಅಲ್ಲಿಯೆ ಮೂಲಸ್ಥಾನ ಸ್ಥಾಪ್ಯವಾಯಿತ್ತು ಸ್ವದೇಹ ಶಿವಪುರದಲ್ಲಿ. ವಾಯು ಪೂಜಾರಿಯಾಗಿ
ಪರಿಮಳದಿಂಡೆಯ ಕಟ್ಟಿ
ಪೂಜಿಸುತಿರ್ದುದು_ಓ ನವದ್ವಾರಶಿವಾಲಯದ ಆದಿ ಮಧ್ಯಸ್ಥಾನದಲ್ಲಿ! ಗುಹೇಶ್ವರನೆಂಬುದಲ್ಲಿಯೇ ನಿಂದಿತ್ತು.