ಉದಯದಲೆದ್ದು ನಿಮ್ಮ ನೆನೆವೆನಯ್ಯಾ.

ವಿಕಿಸೋರ್ಸ್ದಿಂದ



Pages   (key to Page Status)   

ಉದಯದಲೆದ್ದು ನಿಮ್ಮ ನೆನೆವೆನಯ್ಯಾ. ಕಸದೆಗೆದು ಚಳೆಯ ಕೊಟ್ಟು ನಿಮ್ಮ ಬರವ ಹಾರುತಿರ್ದೆನಯ್ಯಾ. ಹಸೆ ಹಂದರವನಿಕ್ಕಿ ನಿಮ್ಮಡಿಗಳಿಗೆಡೆಮಾಡಿಕೊಂಡಿರ್ದೆನಯ್ಯಾ. ಚೆನ್ನಮಲ್ಲಿಕಾರ್ಜುನಯ್ಯಾ
ನೀನಾವಾಗ ಬಂದೆಯಾ ಎನ್ನ ದೇವಾ ?