ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು
ಹುಯಿಲಗೋಳ ನಾರಾಯಣರಾಯರು
೧೮೮೪ ಅಕ್ಟೋಬರ್ ೪ ರಂದು ಗದಗದಲ್ಲಿ ಜನಿಸಿದರು. ಇವರ ತಂದೆ ಕೃಷ್ಣರಾಯರು , ತಾಯಿ ರಾಧಾಬಾಯಿ(ಬಹಿಣಕ್ಕ). ಬಾಲ್ಯದ ಶಿಕ್ಷಣವನ್ನು ಗದಗ, ಗೋಕಾಕ ಹಾಗೂ ಧಾರವಾಡಗಳಲ್ಲಿ ಪೂರೈಸಿದರು. ೧೯೦೨ ರಲ್ಲಿ ಧಾರವಾಡದಲ್ಲಿ ಮೆಟ್ರಿಕ್ ಪರೀಕ್ಷೆಯನ್ನು ಮುಗಿಸಿ ಉಚ್ಚ ಶಿಕ್ಷಣಕ್ಕಾಗಿ ಪುಣೆಯ ಫರ್ಗ್ಯೂಸನ್ ಕಾಲೇಜನ್ನು (ಮುಂಬೈ ವಿಶ್ವವಿದ್ಯಾಲಯ) ಸೇರಿದರು. ೧೯೦೭ ರಲ್ಲಿ ಬಿ.ಎ. ಪದವಿಯನ್ನು ಪಡೆದ ಬಳಿಕ ಧಾರವಾಡದ ವಿಕ್ಟೋರಿಯಾ ಪ್ರೌಢಶಾಲೆಯಲ್ಲಿ ಶಿಕ್ಷಕರಾದರು. ಕೆಲಕಾಲದ ನಂತರ ಶಿಕ್ಷಕ ವೃತ್ತಿಯನ್ನು ತ್ಯಜಿಸಿ, ಮುಂಬೈಗೆ ತೆರಳಿ,ಕಾನೂನು ಪದವಿಯನ್ನು ಪಡೆದು ೧೯೧೧ರಲ್ಲಿ ವಕೀಲಿ ವೃತ್ತಿಯನ್ನು ಗದಗದಲ್ಲಿ ಆರಂಭಿಸಿದರು.
ಹುಯಿಲಗೋಳ ನಾರಾಯಣರು. 1924 ರಲ್ಲಿ ಬೆಳಗಾವಿಯಲ್ಲಿ ಜರುಗಿದ, ಮಹಾತ್ಮಾ ಗಾಂಧಿ ಯವರು ಅಧ್ಯಕ್ಷತೆ ವಹಿಸಿದ್ದ ಕಾಂಗ್ರೆಸ್ ಅಧಿವೇಶನದಲ್ಲಿ ಸ್ವಾಗತಗೀತೆಯಾಗಿ ಬಾಲಕಿಯಾಗಿದ್ದ ಗಂಗೂಬಾಯಿ ಹಾನಗಲ್ ಹಾಡಿದ್ದರು. ಈ ಗೀತೆ ಕರ್ನಾಟಕ ರಾಜ್ಯದ ನಾಡಗೀತೆಯೆಂದು ಖ್ಯಾತಿ ಪಡೆದಿತ್ತು. 1970 ರಲ್ಲಿ ಅಧಿಕೃತ ನಾಡಗೀತೆ ಪಟ್ಟಿಯಿಂದ ಇದನ್ನು ತೆಗೆದು ಹಾಕಲಾಯಿತು. ಇಂದೂ ಕೂಡ ಈ ಹಾಡು ಜನಪ್ರಿಯತೆ ಹೊಂದಿದೆ. ಹುಯಿಲಗೋಳ ನಾರಾಯಣರ ತಂದೆ ಕೃಷ್ಣರಾಯರು , ತಾಯಿ ರಾಧಾಬಾಯಿ. 1884 ಅಕ್ಟೋಬರ್ 4 ರಂದು ಗದಗದಲ್ಲಿ ಜನಿಸಿದರು. 4, ಜುಲೈ 1971 ರಂದು ಹುಬ್ಬಳ್ಳಿಯಲ್ಲಿ ನಿಧನರಾದರು.
ಪ್ರಶಸ್ತಿ ಹಾಗು ಗೌರವಗಳು
ಮುಂಬಯಿ ಸರಕಾರವು ಪತಿತೋದ್ಧಾರ ನಾಟಕಕ್ಕೆ 1954ರಲ್ಲಿ ಬಹುಮಾನ ನೀಡಿತು
ಕಲೋಪಾಸಕ ಮಂಡಳಿಯಿಂದ ಸನ್ಮಾನ – 1952
ಗದಗ – ಬೆಟಗೇರಿ ನಾಗರಿಕರಿಂದ ಸನ್ಮಾನ – 1935
ಗದಗ ವಕೀಲರ ಸಂಗದಿಂದ – 1955
ಕರ್ನಾಟಕ ಸರ್ಕಾರ ಪ್ರಥಮ ರಾಜ್ಯೋತ್ಸವ – 1956
ಕನ್ನಡ ಸಾಹಿತ್ಯ ಪರಿಷತ್ತು -1961
ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು
ಬದುಕು ಬಲುಹಿನ ನಿಧಿಯು ಸದಭಿಮಾನದ ಗೂಡು ||ಪ||
ರಾಜನ್ಯರಿಪು ಪರಶುರಾಮನಮ್ಮನ ನಾಡು
ಆ ಜಲಧಿಯನೆ ಜಿಗಿದ ಹನುಮನುದಿಸಿದ ನಾಡು
ಓಜೆಯಿಂ ಮೆರೆದರಸುಗಳ ಸಾಹಸದ ಸೂಡು
ತೇಜವನು ನಮಗೀವ ವೀರವೃಂದದ ಬೀಡು ||ಪ||
ಲೆಕ್ಕಿಗಮಿತಾಕ್ಷರರು ಬೆಳೆದು ಮೆರೆದಿಹ ನಾಡು
ಜಕ್ಕಣ ಶಿಲ್ಲಕಲೆ ಅಚ್ಚರಿಯ ಕರುಗೋಡು
ಚೊಕ್ಕ ಮತಗಳ ಸಾರಿದವರಿಗಿದು ನೆಲೆವೀಡು
ಬೊಕ್ಕಸದ ಕಣಜವೈ ವಿದ್ವತ್ತೆಗಳ ಕಾಡು ||ಪ||
ಪಾವನೆಯರಾ ಕೃಷ್ಣೆ ಭೀಮೆಯರ ತಾಯ್ನಾಡು
ಕಾವೇರಿ ಗೋದೆಯರು ಮೈದೊಳೆವ ನಲುನಾಡು
ಆವಗಂ ಸ್ಪೂರ್ತಿಸುವ ಕಬ್ಬಿಗರ ನಡೆವಾಡು
ಕಾವ ಗದುಗಿನ ವೀರನಾರಾಯಣನ ಬೀಡು ||ಪ||
ರಚನೆ : ಹುಯಿಲಗೋಳ ನಾರಾಯಣರಾಯರು
ಸಂಗೀತ : ಪಿ.ಕಾಳಿಂಗರಾವ್