ಉದಯಾಸ್ತಮಾನವೆಂಬೆರಡು ಕೊಳಗದಲ್ಲಿ ಆಯುಷ್ಯವೆಂಬ ರಾಶಿ ಅಳೆದು ತೀರದ ಮುನ್ನ ಶಿವನ ನೆನೆಯಿರೆ ! ಶಿವನ ನೆನೆಯಿರೆ ! ಈ ಜನ್ಮ ಬಳಿಕಿಲ್ಲ. ಚೆನ್ನಮಲ್ಲಿಕಾರ್ಜುನದೇವರದೇವನ ನೆನೆದು ಪಂಚಮಹಾಪಾತಕರೆಲ್ಲರು ಮುಕ್ತಿವಡೆದರಂದು ?