ವಿಷಯಕ್ಕೆ ಹೋಗು

ಉದಯ ಮಧ್ಯಾಹ್ನ ಅಸ್ತಮಾನವೆಂಬ

ವಿಕಿಸೋರ್ಸ್ದಿಂದ


Title vachana saahitya
Author ChennaBasavanna
Year 1144-1168 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಉದಯ ಮಧ್ಯಾಹ್ನ ಅಸ್ತಮಾನವೆಂಬ ತ್ರಿಕಾಲದಲ್ಲಿ ಪ್ರಾಣಲಿಂಗಕ್ಕೆ ಮಜ್ಜನಕ್ಕೆರೆಯಬೇಕೆಂಬರು. ಉದಯವಾವುದು ? ಮಧ್ಯಾಹ್ನವಾವುದು ? ಅಸ್ತಮಾನವಾವುದು ? ಬಲ್ಲವರು ನೀವು ಹೇಳಿರೆ. ಕಾಯದ ಉದಯವೊ ? ಕಾಯದ ಮಧ್ಯಾಹ್ನವೊ ? ಕಾಯದ ಅಸ್ತಮಾನವೊ ? ಕಾಯದ ಉದಯ ಬಲ್ಲಾತ ಕರ್ಮಿ
ಕಾಯದ ಮಧ್ಯಾಹ್ನವ ಬಲ್ಲತ ಪ್ರಪಂಚಿ
ಕಾಯದ ಅಸ್ತಮಾನವ ಬಲ್ಲಾತ ವಿರಕ್ತ. ಜೀವದ ಉದಯವೊ ? ಜೀವದ ಮಧ್ಯಾಹ್ನವೊ ? ಜೀವದ ಅಸ್ತಮಾನವೊ ? ಜೀವದ ಉದಯವ ಬಲ್ಲಾತ ಜ್ಞಾನಿ
ಜೀವದ ಮಧ್ಯಾಹ್ನವ ಬಲ್ಲಾತ ಜಾತಿಸ್ಮರ
ಜೀವದ ಅಸ್ತಮಾನ ಬಲ್ಲಾತ ಜೀವನ್ಮುಕ್ತ ಲಿಂಗದ ಉದಯ
ಲಿಂಗದ ಮಧ್ಯಾಹ್ನ
ಲಿಂಗದ ಅಸ್ತಮಾನ- ಇಂತೀ ತ್ರಿಕಾಲದಲ್ಲಿ ಪ್ರಾಣಲಿಂಗಕ್ಕೆ ಮಜ್ಜನಕ್ಕೆರೆಯಬಲ್ಲಡೆ ಕೂಡಲಚೆನ್ನಸಂಗಮದೇವರಲ್ಲಿ ಆತನು ಅನವರತ ಲಿಂಗಾರ್ಚನಾಪರನು.