ಉದಯ ಮಧ್ಯಾಹ್ನ ಸಂಧ್ಯಾಕಾಲವ ನೋಡಿ ಮಾಡುವ ಕರ್ಮಿ ನೀ ಕೇಳಾ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಉದಯ ಮಧ್ಯಾಹ್ನ ಸಂಧ್ಯಾಕಾಲವ ನೋಡಿ ಮಾಡುವ ಕರ್ಮಿ ನೀ ಕೇಳಾ;
ಉದಯವೆಂದೇನೊ ಶರಣಂಗೆ ಮಧ್ಯಾಹ್ನವೆಂದೇನೊ ಶರಣಂಗೆ ಅಸ್ತಮಾನವೆಂದೇನೊ
ಶರಣಂಗೆ ಮಹಾಮೇರುವಿನ ಮರೆಯಲ್ಲಿರ್ದು ತಮ್ಮ ನೆಳಲನರಸುವ ಭಾವಭ್ರಮಿತರ ಮೆಚ್ಚ
ನಮ್ಮ ಕೂಡಲಸಂಗಮದೇವರು.