ಉರಿಯ ಸೀರೆಯನುಟ್ಟು, ಕಡೆಸೆರಗ
ಗೋಚರ
ಲೇಖಕರು: ಚೆನ್ನಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1144-1168 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಉರಿಯ ಸೀರೆಯನುಟ್ಟು
ಕಡೆಸೆರಗ ಬಿಡುಬೀಸಿ
ಮಡದಿ ತನ್ನ ಕೆಳದಿಯರನೊಡಗೊಂಡು ಆಡುತ್ತಿರೆ
ಪತಿ ಬಂದು ಮುಡಿಯ ಹಿಡಿದು ಸೀರೆಯನುಗಿಯೆ
ಮಡದಿಯೊಡಗೂಡುತ್ತಿರೆ; ಸಮರಸದಲ್ಲಿ ಸತಿಯಳಿದು ಪತಿಯಾಗಿ
ಪತಿಯಳಿದು ನಿಃಪತಿಯಾಗಿ
ಸತಿ ಪತಿ ನಿಃಪತಿ- ಎಂಬ ತ್ರಿವಿಧವು ಏಕಾರ್ಥವಾದ ಕೂಡಲಚೆನ್ನಸಂಗಯ್ಯನಲ್ಲಿ
ಬಸವಣ್ಣನ ಪಾದಕ್ಕೆ ನಮೋ ನಮೋ ಎನುತಿರ್ದೆನು