ಉಲುಹಿನ ವೃಕ್ಷದ ನೆಳಲಡಿಯಲಿರ್ದು ಗಲಭೆಯನೊಲ್ಲೆನೆಂಬುದೆಂತಯ್ಯಾ? ಪಟ್ಟದರಾಣಿಯ ಮುಖವ ಮುದ್ರಿಸಿ ಮೆಟ್ಟಿ ನಡೆವ ಸತಿಯ ಶಿರವ ಮೆಟ್ಟಿ ನಿಲುವ ಪರಿಯೆಂತಯ್ಯಾ? ಆದಿಯ ಹೆಂಡತಿಯನುಲ್ಲಂಘಿಸಿದ ಕಾರಣ ಮೇದಿನಿಯ ಮೇಲೆ ನಿಲಬಾರದು. ಸಾಧಕರೆಲ್ಲರು ಮರುಳಾದುದ ಕಂಡು ನಾಚಿ ನಗುತ್ತಿರ್ದೆನು ಗುಹೇಶ್ವರಾ.