ಊರ ಮುಂದೆ ಹಾಲತೊರೆ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಊರ ಮುಂದೆ ಹಾಲತೊರೆ ಇರಲು ನೀರಡಸಿ ಬಂದೆನಲ್ಲಯ್ಯ ನಾನು. ಬರುದೊರೆವೋದವಳನೆನ್ನನಪ್ಪದಿರಯ್ಯಾ. ನೀನೊತ್ತಿದ ಕಾರಣ ಬಂದೆನಯ್ಯ. ಹೆರಿಗೆ ಕೂತವಳ ತೆಗೆದಪ್ಪುವನೆಗ್ಗ ನೋಡಾ ? ಈ ಸೂನೆಗಾರಂಗೆ ಕುರಿಯ ಮಾರುವರೆ ? ಮಾರಿದರೆಮ್ಮವರೆನ್ನ ನಿನಗೆ. ಎನ್ನತ್ತ ಮುಂದಾಗದಿರು
ಎನ್ನಮೇಲೆ ಕಾಲನಿಡದಿರು. ಚೆನ್ನಮಲ್ಲಿಕಾರ್ಜುನಂಗೆ ಸಲೆ ಮಾರುವೋದವಳಾನು.