ಎಂಬತ್ತುನಾಲ್ಕುಲಕ್ಷ ಹುಟ್ಟಿ ಮಂಡಲದೊಳಗೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಎಂಬತ್ತುನಾಲ್ಕುಲಕ್ಷ ಮಂಡಲದೊಳಗೆ ಒಂದೊಂದು ಜನ್ಮದಲ್ಲಿ ಸಹಸ್ರವೇಳೆ ಸತ್ತು ಹುಟ್ಟಿ ಸುತ್ತಿಸುಳಿದು ಸುಖದುಃಖಗಳಿಂದೆ ನೊಂದು ಬೆಂದು ತೊಳಲಿ ಬಳಲುವ ಜೀವಂಗೆ
ಬಡವಂಗೆ ಕಡವರ ದೊರೆಕೊಂಡಂತೆ
ಮನುಷ್ಯದೇಹವು ದೊರೆಕೊಂಡಲ್ಲಿ
ಶಿವಕೃಪೆಯಿಂದ ಗುರುಕಾರುಣ್ಯವಾಗಿ ಅಂಗದ ಮೇಲೆ ಲಿಂಗಧಾರಣವಾದ ಬಳಿಕ ಆ ಲಿಂಗದ ಮೇಲೆ ಪ್ರಾಣಪ್ರತಿಷೆ*ಯಂ ಮಾಡಿ ನಿಮಿಷ ನಿಮಿಷಾರ್ಧವಗಲದಿರಬೇಕು. ಮತ್ತಂ
ಆ ಲಿಂಗದಲ್ಲಿ ಐಕ್ಯವಾಗುವನ್ನಬರ ಸತ್ಕ್ರಿಯಾ ಸಮ್ಯಕ್‍ಜ್ಞಾನವ ಬಿಡದಿರಬೇಕು. ಇಷ್ಟುಳ್ಳಾತಂಗೆ ಶಿವನಲ್ಲಿ ಸಮರಸವಲ್ಲದೆ
ಅಂತರಂಗದಲ್ಲಿ ಅಂತಃಪ್ರಾಣಲಿಂಗದ ಪರಿಪೂರ್ಣ ಬೆಳಗಕಂಡೆವು. ಇನ್ನು ಇಷ್ಟಲಿಂಗದ ಹಂಗು ಏತಕೆಂದು ಆ ಇಷ್ಟಲಿಂಗವ ಕಡೆಗೆ ತೆಗೆದು ಹಾಕಿ ಲಿಂಗಬಾಹ್ಯನಾಗಿ ವ್ರತಗೇಡಿಯಾದಾತನು ಒಂದುಕೋಟಿ ಕಲ್ಪಾಂತರವು ನರಕದೊಳಗಿರ್ದು ಅಲ್ಲಿಂದತ್ತ ಎಂಬತ್ತುನಾಲ್ಕುಲಕ್ಷ ಜನ್ಮದಲ್ಲಿ ಬಂಧನಬಡುತಿರ್ಪನಲ್ಲದೆ ಶಿವನಲ್ಲಿ ಅವಿರಳ ಸಮರಸವಿಲ್ಲ ನೋಡಾ ! ಅದೆಂತೆಂದೊಡೆ : ``ಅಂಗೇ ಚ ಲಿಂಗಸಂಬಂಧಃ ಲಿಂಗಂಚ ಪ್ರಾಣಸಂಯುತಂ