ಎಣಿಕೆಗೆ ಬಂದ ಸಯದಾನ ಕ್ಷಣಕ್ಕೆ ಪಾಕವಾಗಲು

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಎಣಿಕೆಗೆ ಬಂದ ಸಯದಾನ ಕ್ಷಣಕ್ಕೆ ಪಾಕವಾಗಲು
ಗಣನೆಯಿಲ್ಲದೆ ನೀಡುತ್ತಿರಲು
ತೋರದ ಮುನ್ನವೆ ಅರ್ಪಿತವಾದವು. ಇಂತು ಎಣಿಸಿ ನೋಡೆಹೆನೆಂದಡೆ ಮನಕೆ ಸಾಧ್ಯವಲ್ಲ
ಬಯಲು ಬಾಯಿದೆಗೆದಂತೆ ಉಣ್ಣುತ್ತಿದ್ದಾನು
ಕೂಡಲಸಂಗಮದೇವನು.