ಎತ್ತೆತ್ತ ನೋಡಿದಡೆ ಬಸವಣ್ಣನೆಂಬ
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಎತ್ತೆತ್ತ ನೋಡಿದಡೆ ಬಸವಣ್ಣನೆಂಬ ಬಳ್ಳಿ
ಆ ಬಳ್ಳಿಯ ಹಿಡಿದೆತ್ತಿದಡೆ ಲಿಂಗವೆಂಬ ಗೊಂಚಲು. ಆ ಲಿಂಗದ ಗೊಂಚಲ ಹಿಡಿದೆತ್ತಿದಡೆ
ಭಕ್ತಿರಸಮಯವಾಯಿತ್ತಯ್ಯಾ. ಇದಾರಯ್ಯಾ ಅಮಳೋಕ್ಯವ ಮಾಡಬಲ್ಲವರು ? ಇದಾರಯ್ಯಾ ಹೊರಗೆ ಪ್ರಜ್ವಲಿಸಿ ತೋರಬಲ್ಲವರು ? ಬಸವಗುರು[ವೆ] ಎನ್ನ ಕರಸ್ಥಲದ ಲಿಂಗದ ಆದಿಯನರುಹಿ ತೋರಿದ ಕಾರಣ
ಗುಹೇಶ್ವರಲಿಂಗದ ನಿಲವ ನಿನ್ನಿಂದಲರಿದೆ
ಈ ಲೋಕಾದಿಲೋಕಂಗಳೆಲ್ಲವು ಎನ್ನ ಮುಖದಲ್ಲಿ ಕಿಂಚಿತ್ತು.