ಎದೆ ಬಿರಿವನ್ನಕ್ಕ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಎದೆ ಬಿರಿವನ್ನಕ್ಕ, ಮನ ದಣಿವನ್ನಕ್ಕ, ನಾಲಗೆ ನಲಿನಲಿದೋಲಾಡುವನ್ನಕ್ಕ ನಿಮ್ಮ ನಾಮಾಮೃತವ ತಂದೆರೆಸು ಕಂಡಯ್ಯಾ, ಎನಗೆನ್ನ ತಂದೆ. ಬಿರಿಮುಗುಳಂದದಿ ಎನ್ನ ಹೃದಯ ನಿಮ್ಮ ಶ್ರೀಚರಣದ ಮೇಲೆ ಬಿದ್ದರಳುಗೆ, ಕೂಡಲಸಂಗಯ್ಯಾ.