ಎನಗೆ ಜನನವಾಯಿತ್ತೆಂಬರು ಎನಗೆ ಜನನವಿಲ್ಲವಯ್ಯಾ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಎನಗೆ ಜನನವಾಯಿತ್ತೆಂಬರು ಎನಗೆ ಜನನವಿಲ್ಲವಯ್ಯಾ
ಎನಗೆ ಮರಣವಾಯಿತ್ತೆಂಬರು ಎನಗೆ ಮರಣವಿಲ್ಲವಯ್ಯಾ. ಜನನವಾದಡೆ ನಿಮ್ಮ ಪಾದೋದಕ ಪ್ರಸಾದವ ಕೊಂಬೆ
ಮರಣವಾದಡೆ ನಿಮ್ಮ ಶ್ರೀಚರಣವನೆಯ್ದುವೆ. ಬಾವನ್ನದ ವೃಕ್ಷವು ಊರೊಳಗಿದ್ದಡೇನು
ಅಡವಿಯೊಳಗಿದ್ದಡೇನು ಪರಿಮಳ ಒಂದೇ
ಕೂಡಲಸಂಗಮದೇವಾ.