ಎನಿಸು ಕಾಲ ಕಲ್ಲು ನೀರೊಳಗಿದ್ದಡೇನು

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಎನಿಸು ಕಾಲ ಕಲ್ಲು ನೀರೊಳಗಿದ್ದಡೇನು
ನೆನೆದು ಮೃದುವಾಗಬಲ್ಲುದೆ ಎನಿಸು ಕಾಲ ನಿಮ್ಮ ಪೂಜಿಸಿ ಏವೆನಯ್ಯಾ
ಮನದಲ್ಲಿ ದೃಡವಿಲ್ಲದನ್ನಕ್ಕ ನಿದಾನವ ಕಾಯಿದಿರ್ದ ಬೆಂತರನಂತೆ ಅದರ ವಿಧಿ ಎನಗಾಯಿತ್ತು
ಕೂಡಲಸಂಗಮದೇವಾ.