ಎನ್ನಂತರಂಗದೊಳಗಣ ಆತ್ಮಲಿಂಗ, ಅನಂತ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಎನ್ನಂತರಂಗದೊಳಗಣ ಆತ್ಮಲಿಂಗ
ಅನಂತ ಜ್ಯೋತಿಯಂತಿಪ್ಪುದು ನೋಡಾ. ಬಹಿರಂಗದಲ್ಲಿ ನವರತ್ನದಂತಿಪ್ಪುದಯ್ಯ. ತಿಂಗಳ ಸೂಡಿದಭವನು ಭವಭಂಗಿತರಿಗಾರಿಗೂ ಗೋಚರಿಸನು ಕಾಣ. ಲಿಂಗನಿಷ್ಠಾಂಗಿಗಳಿಗೆ ಮಂಗಳಮಯನಾಗಿ ತೋರ್ಪನು
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭು ತಾನೇ ಕಾಣಿರೋ.