ಎನ್ನಂತರಂಗವೆಂಬ ಭೂಮಿಯಲ್ಲಿ ಮಹಾಜ್ಞಾನವೆಂಬ
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಎನ್ನಂತರಂಗವೆಂಬ ಭೂಮಿಯಲ್ಲಿ ಮಹಾಜ್ಞಾನವೆಂಬ ನಿಧಾನ ಭೂಗತವಾಗಿದ್ದಿತ್ತಯ್ಯಾ. ಶ್ರೀಗುರುವೆಂಬ ಅಂಜನಸಿದ್ಧನು ಬಂದು
ಎನ್ನ ಅದಕ್ಕೆ ಬಲೆಯನಿಕ್ಕಿ
ತನ್ನ ಕರುಣಾಮೃತವೆಂಬ ಮರುಜವಣಿಯ ಹಿಂಡಿ ಆ ನಿಧಾನವನೆನಗೆ ಕರತಳಾಮಳಕವ ಮಾಡಿಕೊಟ್ಟನಯ್ಯಾ. ಗುಹೇಶ್ವರಾ_ನಿಮ್ಮ ಶರಣ ಅನಿಮಿಷನೆಂಬ ಶ್ರೀಗುರು.