ಎನ್ನಲ್ಲಿ ನಾನು ನಿಜವಾಗಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಎನ್ನಲ್ಲಿ ನಾನು ನಿಜವಾಗಿ ನಿಮ್ಮನರಿದೆಹೆನೆಂದಡೆ ಅದು ನಿಮ್ಮ ಮತಕ್ಕೆ ಬಪ್ಪುದೆ? ಎನ್ನ ನಾನು ಮರೆದು
ನಿಮ್ಮನರಿದಡೆ
ಅದು ನಿಮ್ಮ ರೂಪೆಂಬೆ. ಎನ್ನ ನಿನ್ನೊಳು ಮರೆದಡೆ
ಕನ್ನಡಿಯೊಳಗಣ ಪ್ರತಿಬಿಂಬದಂತೆ ಭಿನ್ನವಿಲ್ಲದೆ ಇದ್ದೆನು ಕಾಣಾ ಗುಹೇಶ್ವರಾ.