ಎನ್ನ ಕಾಯದ ಕತ್ತಲೆಯ ಕಳೆಯಲರಿಯೆನು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಎನ್ನ ಕಾಯದ ಕತ್ತಲೆಯ ಕಳೆಯಲರಿಯೆನು
ಎನ್ನ ಜೀವದ ನಿಲವ ಗೆಲಲರಿಯೆನು
ಎನ್ನ ಭಾವದ ಸೂತಕವ ಕಳೆಯಲರಿಯೆನು. ನಾನೆಂತು ಬಲ್ಲೆನಯ್ಯಾ ನಿಮ್ಮ ಘನಮಹಿಮರ ನಿಲವ ಕೂಡಲಸಂಗಮದೇವಾ
ನಿಮ್ಮ ಶರಣ ಮಡಿವಾಳ ಮಾಚಿತಂದೆಯ ಘನವ ನೀವೆ ಬಲ್ಲಿರಿ.