ಎನ್ನ ಕಾಯವೆಂಬ ಸಿಂಹಾಸನದಲ್ಲಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಎನ್ನ ಕಾಯವೆಂಬ ಸಿಂಹಾಸನದಲ್ಲಿ ಪ್ರಾಣವೆಂಬ ಲಿಂಗವ ಮೂರ್ತಗೊಳಿಸಿ
ಧ್ಯಾನವೆಂಬ ಹಸ್ತದಲ್ಲಿ ಮುಚ್ಚಿ ಪೂಜಿಸುತಿರಲು
ಮೆಲ್ಲಮೆಲ್ಲನೆ ಸುತ್ತಿ ಮುತ್ತಿದ ಸಂಸಾರ
ಬಯಲ ಬೆರಸಿ
ನಾ ನೀನೆಂಬ ಭೇದವಳಿದು
ಮಹಾದಾನಿ ಗುಹೇಶ್ವರನ ನೋಡಲಾಗಿ ನಿಜಲಿಂಗವಾಯಿತ್ತು.