ಎನ್ನ ಪ್ರಾಣನೊಳಗೆ ಹೂಳಿರ್ದ
ಗೋಚರ
ಲೇಖಕರು: ತೊಂಟದ ಸಿದ್ಧಲಿಂಗೇಶ್ವರ ಶಿವಯೋಗಿಗಳು
ಶೀರ್ಷಿಕೆ: vachana saahitya
ವರ್ಷ: 1550-1600 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಎನ್ನ ಪ್ರಾಣನೊಳಗೆ ಹೂಳಿರ್ದ ಪರಮಕಳೆಯ ತೆಗದು ಶಿವಲಿಂಗಮೂರ್ತಿಯ ಮಾಡಿ ಎನ್ನ ಕರಸ್ಥಲಕ್ಕೆ ಕೊಟ್ಟನಯ್ಯ ಶ್ರೀಗುರು. ಆ ಲಿಂಗವು ಸರ್ವಾವಸ್ಥೆಯಲ್ಲಿಯು ಅಂಗವ ಬಿಟ್ಟು ಅಗಲಲಾಗದುಯೆಂದು ನಿರೂಪಿಸಿದನಯ್ಯ ಶ್ರೀಗುರು. ಇದು ಕಾರಣ
ಅಂಗವ ಬಿಟ್ಟು ಲಿಂಗ ನಿಮಿಷಾರ್ಧವಗಲಿದಡೆ
ನಾಯಕನರಕ ತಪ್ಪದಯ್ಯಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.