ಎನ್ನ ಭಕ್ತಿ ಬಸವಣ್ಣನ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಎನ್ನ ಭಕ್ತಿ ಬಸವಣ್ಣನ ಧರ್ಮ
ಎನ್ನ ಜ್ಞಾನ ಪ್ರಭುವಿನ ಧರ್ಮ
ಎನ್ನ ಪರಿಣಾಮ ಚೆನ್ನಬಸವಣ್ಣನ ಧರ್ಮ. ಈ ಮೂವರು ಒಂದೊಂದ ಕೊಟ್ಟೊಡೆನಗೆ ಮೂರು ಭಾವವಾಯಿತ್ತು. ಆ ಮೂರನು ನಿಮ್ಮಲ್ಲಿ ಸಮರ್ಪಿಸಿದ ಬಳಿಕ ಎನಗಾವ ಜಂಜಡವಿಲ್ಲ. ಚೆನ್ನಮಲ್ಲಿಕಾರ್ಜುನದೇವರ ನೆನಹಿನಲ್ಲಿ ನಿಮ್ಮ ಕರುಣದ ಕಂದನಾಗಿದ್ದೆ ಕಾಣಾ ಸಂಗನಬಸವಣ್ಣಾ.