ಎನ್ನ ಮನವು ನಿಮ್ಮ ಚರಣವ ಕಂಡ ಬಳಿಕ ಬೆರಸಿಯಲ್ಲದೆ ಅಗಲಿ ಸೈರಿಸಲಾರೆನಯ್ಯಾ. ತ್ರಾಹಿ ತ್ರಾಹಿ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಎನ್ನ ಮನವು ನಿಮ್ಮ ಚರಣವ ಕಂಡ ಬಳಿಕ ಬೆರಸಿಯಲ್ಲದೆ ಅಗಲಿ ಸೈರಿಸಲಾರೆನಯ್ಯಾ. ತ್ರಾಹಿ ತ್ರಾಹಿ
ಘನಮಹಿಮಾ
ನಿಮ್ಮ ಪಾದಾರ್ಚನೆಗೆ ಎನ್ನ ಪರಮಾನಂದಜಲವ ತುಂಬುವೆನಯ್ಯಾ. ಪೂಜೆಯ ಮಾಡುವಡೆ ಎನ್ನ ಹೃದಯಕಮಲವನ[ರ್ಪಿ]ಸುವೆ
ಆರತಿಯಿಂದ ಆರತಿಯನೆತ್ತುವೆ
ಎನ್ನ ಮಹಾಪ್ರಕಾಶದ ಧೂಪವ ಬೀಸುವೆ
ಎನ್ನ ಸ್ವಾನುಭಾವದ ಗಂಧವನೀವೆ. ಈ ತೆರನಲ್ಲದೆ ಅಷ್ಟವಿಧಾರ್ಚನೆ ಷೋಡಶೋಪಚಾರವೆಂಬುದಕ್ಕೆ ಬೇರೆ ತೆರನ ಕಾಣೆನಯ್ಯಾ. ಕೂಡಲಸಂಗಮದೇವಯ್ಯಾ
ಪ್ರಭುವೆನ್ನ ಪ್ರಾಣಲಿಂಗವೆಂಬುದು ಎನಗಿಂದು ಕಾಣಬಂದಿತ್ತು ನೋಡಯ್ಯಾ.