ಎನ್ನ ಲಿಂಗವಾದನಯ್ಯಾ ಕಾಯಕ್ಕೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಎನ್ನ ಕಾಯಕ್ಕೆ ಗುರುವಾದನಯ್ಯಾ ಬಸವಣ್ಣನು. ಎನ್ನ ಜೀವಕ್ಕೆ ಲಿಂಗವಾದನಯ್ಯಾ ಚೆನ್ನಬಸವಣ್ಣನು. ಎನ್ನ ಪ್ರಾಣಕ್ಕೆ ಪ್ರಸಾದವಾದನಯ್ಯಾ ಮರುಳಶಂಕರದೇವರು. ಎನ್ನ ಜ್ಞಾನಕ್ಕೆ ಜಂಗಮವಾದನಯ್ಯಾ ಪ್ರಭುದೇವರು. ಇಂತಿವರ ಕರುಣದಿಂದಲಾನು ಬದುಕಿದೆನಯ್ಯಾ
ನಿಜಗುರು ಶಂಕರದೇವಾ.