ಎಮ್ಮೆಗೊಂದು ಚಿಂತೆ; ಸಮಗಾರಗೊಂದು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಎಮ್ಮೆಗೊಂದು ಚಿಂತೆ; ಸಮಗಾರಗೊಂದು ಚಿಂತೆ. ಧರ್ಮಿಗೊಂದು ಚಿಂತೆ; ಕರ್ಮಿಗೊಂದು ಚಿಂತೆ. ಎನಗೆ ಎನ್ನ ಚಿಂತೆ
ತನಗೆ ತನ್ನ ಕಾಮದ ಚಿಂತೆ. ಒಲ್ಲೆ ಹೋಗು
ಸೆರಗ ಬಿಡು ಮರುಳೆ. ಎನಗೆ ಚೆನ್ನಮಲ್ಲಿಕಾರ್ಜುನದೇವರು ಒಲಿವರೊ ಒಲಿಯರೊ ಎಂಬ ಚಿಂತೆ !