ವಿಷಯಕ್ಕೆ ಹೋಗು

ಎರಡು ನೇತ್ರ ಒಂದಾದ

ವಿಕಿಸೋರ್ಸ್ದಿಂದ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಎರಡು ನೇತ್ರ ಒಂದಾದ ಭಾಳನೇತ್ರವು ಇಷ್ಟಲಿಂಗದ ಗೋಳಕಕ್ಕೆ ಕೂಟವು. ಒಂದು ಲಿಂಗ ಎರಡಾದುದೆ ಇಷ್ಟ ಪ್ರಾಣಲಿಂಗವು. ಆ ಪ್ರಾಣಲಿಂಗದ ಹಸ್ತಂಗಳಿಗೆರಡು ನೇತ್ರಂಗಳೆ ಕುಚಂಗಳು
ಆ ಕುಚಂಗಳು ಹಿಡಿಯಲಿಕೆ
ಈ ಕುಚವೆರಡು ಗುಹ್ಯ ಒಂದು ಕೂಡಿ ತ್ರಿಕೂಟವೆಂಬ ಹೆಸರಾಯಿತ್ತು. ಆ ತ್ರಿಕೂಟವೆಂಬ ಶಾಂಭವಪುರದ ಮಧ್ಯದಲ್ಲಿ ಜ್ಯೋತಿರ್ಲಿಂಗವೇಕವಾದ ಬಳಿಕ
ತನುತ್ರಯದ ವಿಕಾರವ ಹೊದ್ದಲಾಗದು. ವಿಕಾರವ ಹೊದ್ದಿದರೆ ಮೀಸಲೋಗರವ ಶುನಿಮುಟ್ಟಿದಂತಾಯಿತ್ತು ಆ ಜೀವಾತ್ಮಪದಾರ್ಥವು ಲಿಂಗಕ್ಕೆ ಸಲ್ಲದು
ಅವರ ತೆರನೆಂತಾಯಿತ್ತೆಂದಡೆ ; ಜನ್ಮದಾರಿದ್ರನು ನಿಕ್ಷೇಪವಂ ಕಂಡು ಹೋಗಲಾಗಿ ದಿಗಿಲುಬಿದ್ದು ಸತ್ತಂತಾಯಿತ್ತು. ಅಂಥ ನಿರ್ಭಾಗ್ಯ ದುರ್ಮರಣನ ಕಂಡು ಹೇಸಿ
ತಮ್ಮ ತನುತ್ರಯವಿಕಾರಮಂ ಪೊರ್ದದೆ
ಲಿಂಗ ನಿಕ್ಷೇಪದಲ್ಲಿ ನಿರಂಗವಾಗಿ
ಮನ್ಮಥರತಿಯೆಂಬ ನರಕವ ಬೀಳದೆ
ಅಕ್ಷಯಸುಖಿಗಳಾದರು ನೋಡಾ ಗುಹೇಶ್ವರಲಿಂಗದಲ್ಲಿ.