ಎರಡೆಂಬತ್ತು ಕೋಟಿ ಗೀತವ
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಎರಡೆಂಬತ್ತು ಕೋಟಿ ಗೀತವ ಹಾಡಿದರೇನಯ್ಯಾ ? ಬೆಟ್ಟಕ್ಕೆ ನಾಯಿ ಬೊಗಳಿದಂತಾಯಿತ್ತಯ್ಯಾ. ಮನವು ಘನವ ನೆಮ್ಮದು
ಘನವು ಮನವ ನೆಮ್ಮದು. ಹಾಡಿದರೇನು ಓದಿದರೇನು ? ಗುಹೇಶ್ವರ ನೀನೊಲಿದ ಕಾಲಕ್ಕೆ ಎರಡೆಂಬತ್ತು ಕೋಟಿ ಗೀತವೆಲ್ಲವೂ ನಿಮ್ಮದೊಂದು ಮಾತಿನೊಳಡಕವಯ್ಯಾ.